Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ನ ಮಡಿಕೇರಿ ಚಲೋ; ಬಿಜೆಪಿ ಜಾಗೃತಿ ಸಮಾವೇಶ ಎರಡೂ ರದ್ದು

ದಾವಣಗೆರೆ

ಕಾಂಗ್ರೆಸ್ ನ ಮಡಿಕೇರಿ ಚಲೋ; ಬಿಜೆಪಿ ಜಾಗೃತಿ ಸಮಾವೇಶ ಎರಡೂ ರದ್ದು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣದಿಂದ ಮಡಿಕೇರಿ ಚಲೋ ಕೈಗೊಂಡಿದ್ದ ಕಾಂಗ್ರೆಸ್ ಪ್ರತಿಭಟನೆ ಮುಂದೂಡಿದೆ.  ಈ ನಿರ್ಧಾರ  ಸ್ವಾಗತಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಜಾಗೃತಿ ಸಮಾವೇಶವನ್ನು ರದ್ದು ಮಾಡುವುದಾಗಿ ಘೋಷಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ  ಅವರು, ಆ.26ರಂದು ಹಮ್ಮಿಕೊಂಡಿದ್ದ ಕಾಂಗ್ರೆಸ್ ಮಡಿಕೇರಿ ಚಲೋ ಮುಂದೂಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು ಸಂತೋಷ. ಶಾಂತಿ-ಸುವ್ಯವಸ್ಥೆ ದೃಷ್ಟಿಯಿಂದ ಒಳ್ಳೆಯ ನಿರ್ಧಾರ. ಕಾಂಗ್ರೆಸ್ ನವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದರು.

ಜಿಲ್ಲೆಯಲ್ಲಿ ಶಾಂತಿ ವಾತಾವರಣ ನೆಲೆಸಿದಾಗ ಏನು ಬೇಕಾದರೂ ಮಾಡಲಿ. ಈಗ ಸೌಹಾರ್ದಯುತವಾಗಿ ನಡೆದುಕೊಳ್ಳುತ್ತಿರುವುದು ಸ್ವಾಗತಾರ್ಹ. ಆಗಸ್ಟ್ 26ರಂದು ಬಿಜೆಪಿಯಿಂದ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಕೂಡ ನಾವು ರದ್ದುಗೊಳಿಸುತ್ತೇವೆ ಎಂದು ಹೇಳಿದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top