ಬೆಂಗಳೂರು: ದೇಶದಲ್ಲಿ ಇಂಧನ ಬೆಲೆ, ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಬಳಕೆದಾರರು ಯಾರೂ ಪ್ರತಿಭಟಿಸುತ್ತಿಲ್ಲ. ಆದರೆ, ರಾಜಕಾರಣಿಗಳು ಮಾತ್ರ ಪ್ರತಿಭಟಿಸುತ್ತಿದ್ದಾರೆ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬೆಲೆ ಏರಿಕೆ ಆಗುತ್ತಿದೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಆದರೆ ಇಲ್ಲಿ ರಾಜಕಾರಣ ಮಾಡಲಾಗುತ್ತಿದೆ. ಗ್ಯಾಸ್ ಬಳಕೆದಾರರು ಯಾರೂ ಬೀದಿಗೆ ಬಂದಿಲ್ಲ. ಬೀದಿಗೆ ಬಂದಿರುವವರು ರಾಜಕಾರಣಿಗಳು ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ಬೆಲೆ ಏರಿಕೆ ಆಗಿರಲಿಲ್ವಾ? ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇರುತ್ತದೆ. ಮನೆ ಮನೆಗೆ ಉಚಿತ ಗ್ಯಾಸ್ ಸೌಲಭ್ಯ ಕೊಟ್ಟವರು ಯಾರು? ಇಂಧನ ಬೆಲೆ ಏರಿಳಿತ ಆಗುತ್ತೆ. ಬೆಲೆ ಏರಿಕೆ ಸಮಸ್ಯೆ ಬಗೆಹರಿಸಲು ಪ್ರಧಾನಿ ಸಿದ್ದರಿದ್ದಾರೆ ಎಂದಿದ್ದಾರೆ.



