ಬೆಂಗಳೂರು: ಸಿಡಿ ಪ್ರಕರಣ ಹಿನ್ನೆಲೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಾಗರಿಕೆ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ, ಪ್ರಕರಣಕ್ಕೆ ಸಂಬಂಧ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆದ ಸಿಎಂ ಯಡಿಯೂರಪ್ಪಗೆ ಧನ್ಯವಾದಗಳು. ತನಿಖೆ ಪಾರದರ್ಶಕವಾಗಿ ಆಗಬೇಕು. ಸಂತ್ರಸ್ತ ಯುವತಿಗೂ ನ್ಯಾಯ ಸಿಗುವಂತಾಗಲಿ ಎಂಬುದು ನನ್ನ ಆಗ್ರಹ. ಸಚಿವರ ರಾಜೀನಾಮೆಯಿಂದ ಪಾರದರ್ಶಕ ತನಿಖೆ ನಡೆಯಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ. BREAKING NEWS: ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ
ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಪ್ರಕರಣ ಹೊರ ಬರುತ್ತಿದ್ದಂತೆ ರಾಜ್ಯದ ಎಲ್ಲ ಕಡೆ ಸಚಿವರ ರಾಜೀನಾಮೆಗೆ ಪ್ರತಿಭಟನೆ ಮೂಲಕ ಒತ್ತಡ ಹಾಕಲಾಗಿತ್ತು. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ರಮೇಶ್ ಜಾರಕಿಹೊಳಿ ರವಾನಿಸಿದ್ದಾರೆ.



