Connect with us

Dvgsuddi Kannada | online news portal | Kannada news online

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಆದೇಶಿಸಿದ ಸರ್ಕಾರ

ಪ್ರಮುಖ ಸುದ್ದಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಎಡಿಜಿಪಿ ಸೌಮೇಂದು ಮುಖರ್ಜಿ ನೇತ್ರತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲು ನಿರ್ಧರಿಸಲಾಗಿದೆ. ಕೂಡಲೇ ಸರ್ಕಾರಕ್ಕೆ‌ ವರದಿ ನೀಡುವಂತೆ ಸೂಚನೆ ನೀಡಿದೆ.

ದಮಾಜಿ ಮಂತ್ರಿಗಳಾದ ರಮೇಶ್ ಜಾರಕಿಹೊಳಿ ಅವರು, ಮಾ.2 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಒಂದು ಅರ್ಜಿ ನೀಡಿದ್ದು, ಅದರಲ್ಲಿ ಅವರ ವಿರುದ್ಧ ರಾಜಕೀಯ ತೇಜೋವಧೆ ಹಾಗೂ ಮಾನಹಾನಿ ಮಾಡುವ ಉದ್ದೇಶವಿದ್ದು ಇದರಲ್ಲಿ ಹಲವಾರು ಜನ ಸೇರಿ ಷಡ್ಯಂತ್ರ ರೂಪಿಸಿರುವುದು ಬಹಳ ಸ್ಪಷ್ಟವಾಗಿರುತ್ತದೆ ಎಂದು ತಿಳಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ ಈ ಷಡ್ಯಂತ್ರವನ್ನು ರೂಪಿಸಿರುವ ಹಾಗೂ ಇದರ ಹಿಂದಿರುವ ವ್ಯಕ್ತಿಗಳ ಬಗ್ಗೆ ಕೂಲಂಕುಶವಾಗಿ ವಿಚಾರಣೆ ಯನ್ನು ಮಾಡಲು ಒಂದು ವಿಶೇಷ ತನಿಖಾ ತಂಡವನ್ನು ರಚನೆ ಮಾಡಲು ಹಾಗೂ ಅದರ ನೇತೃತ್ವವನ್ನು ಸೌಮೇಂದು ಮುಖರ್ಜಿ, ಎಡಿಜಿಪಿ ಇವರಿಗೆ ವಹಿಸುವುದು ಮತ್ತು ಈ ಬಗ್ಗೆ ಸಂಪೂರ್ಣ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ನೀಡುವಂತೆ ಸೂಚಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top