ದಾವಣಗೆರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಬಲ ಬಂದಿದೆ. ಇನ್ನುಷ್ಟು ಲಿಂಗಾಯತ ನಾಯಕರು ಪಕ್ಷಕ್ಕೆ ಬರವವರಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಈಗಾಗಲೇ ಪಕ್ಷ ಸೇರ್ಪಡೆಯಾಗಿದ್ದಾರೆ, ಹುಬ್ಬಳ್ಳಿಗೆ ತೆರಳುವ ಮಾರ್ಗಮಧ್ಯೆ ದಾವಣಗೆರೆಗೆ ಬಂದು, ನನ್ನ ಭೇಟಿ ಮಾಡಲಿದ್ದಾರೆ. ನಾನು ಶೆಟ್ಟರ್ ಅವರನ್ನು ಭೇಟಿಯಾಗಲು ಹೋಗವವನಿದ್ದೇನೆ. ಲಿಂಗಾಯತ ನಾಯಕರನ್ನು ಬರುವವರನ್ನು ಬೇಡ ಎನ್ನುವುದಿಲ್ಲ ಎಂದು ತಿಳಿಸಿದರು.
ನಮ್ಮದೇ ಸರ್ಕಾರ ಮಾಡ್ತೀವಿ, ಜಗದೀಶ್ ಶೆಟ್ಟರ್ ಅವರು ಈ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ನಮ್ಮ ಬೀಗರು ಹುಬ್ಬಳ್ಳಿ ಧಾರವಾಡದಿಂದ ಸ್ಪರ್ಧೆ ಮಾಡ್ತಾರೆ. ಅದಕ್ಕಾಗಿ ಬಿ ಫಾರಂ ತೆಗೆದುಕೊಂಡು ಹೋಗಿದ್ದಾರೆ ಎಂದರು.