ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ.ಆದರೆ, ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದಿದ ಮೊಹಮದ್ ನಲಪಾಡ್ ಹ್ಯಾರಿಸ್ ಅವರನ್ನು ಕಣದಿಂದ ಅಸಿಂಧುಗೊಳಿಸಲಾಗಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದಿಂದ ಚುನಾವಣೆ ಫಲಿತಾಂಶ ಪ್ರಕಟಿಸಲಾಗಿದೆ. 64,203 ಮತಗಳನ್ನು ಪಡೆದಿದ್ದರೂ ಮೊಹಮದ್ ನಲಪಾಡ್ ಅವರ ಗೆಲುವನ್ನು ತಡೆಹಿಡಿಯಲಾಗಿದೆ. ಅವರನ್ನು ಅಸಿಂಧು ಎಂದು ಘೋಷಿಸಿದ್ದು ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
57,271 ಮತಗಳನ್ನು ಪಡೆದು ರಕ್ಷಾ ರಾಮಯ್ಯ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಎಸ್. ಮಂಜುನಾಥ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.



