ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಅಂಚೆ ವೃತ್ತದಲ್ಲಿ 2443 ಗ್ರಾಮೀಣ ದಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 20, 2021 ರೊಳಗೆ ಅರ್ಜಿ ಸಲ್ಲಿಸಬಹುದು. ಜನವರಿ 20,2021 ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಎಸ್‌ಎಸ್‌ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಇದಲ್ಲದೆ ಸೈಕ್ಲಿಂಗ್ ಜ್ಞಾನ ಅಥವಾ ಮೋಟಾರ್ ಸೈಕಲ್ ಡ್ರೈವ್ ಮಾಡುವ ಜ್ಞಾನವಿದ್ದರೆ ಅದನ್ನು ಪರಿಗಣಿಸಲಾಗುತ್ತದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ.ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದ ವಿನಾಯಿತಿ ಇದೆ. ಗ್ರಾಮೀಣ ದಕ್ ಸೇವಕ್ ಹುದ್ದೆಗೆ ಮಾಸಿಕ 12,000 ದಿಂದ 14000 ರೂಪಾಯಿ ವೇತನ ನೀಡಲಾಗುತ್ತಿದೆ.
ಕರ್ನಾಟಕ ಅಂಚೆ ವೃತ್ತದಲ್ಲಿ 2,443 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



