ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಕೈಗೊಂಡ ಸಿಐಡಿ, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿಸಿದೆ.
ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.
ರಚನಾಗಾಗಿ ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಗಮನಿಸಿ ಬಂಧಿಸಲಾಗಿದೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಬಂಧಿಸಲಾಗಿದೆ. ಕಳೆದ ಒಂದುವರೆ ತಿಂಗಳಿಂದ ಕಲಬುರಗಿ ಸಿಐಡಿ ಅಧಿಕಾರಿಗಳು ಬೆಲೆ ಬೀಸಿದ್ದರು. ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಐಡಿ ತಂಡ ರಚನಾಳನ್ನು ಬಂಧಿಸಿ ಕಲಬುರಗಿ 5 ನೇ ಜೆ ಎಂಎಫ್ ಸಿ ಕೋರ್ಟ್ ನ್ಯಾಯಾಧೀಶರ ಮುಂದೆ ರಚನಾಳನ್ನು ಹಾಜರುಪಡಿಸಲಾಗೊದ್ದು, ನಂತರ ಕಲಬುರಗಿಯಿಂದ ಬೆಂಗಳೂರು ಪೊಲೀಸರ ವಶಕ್ಕೆ ನೀಡಲಾಗುತ್ತಿದೆ.