Connect with us

Dvgsuddi Kannada | online news portal | Kannada news online

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ; ಏಪ್ರಿಲ್ 22 ರಿಂದ ಪರೀಕ್ಷೆ ಆರಂಭ

768 512 14618878 thumbnail 3x2 bng

ಪ್ರಮುಖ ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ; ಏಪ್ರಿಲ್ 22 ರಿಂದ ಪರೀಕ್ಷೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬದಾಲಾಗಿದೆ. ಈ‌ ಹಿಂದೆ ಏಪ್ರಿಲ್- ಮೇ ತಿಂಗಳಲ್ಲಿ ಪರೀಕ್ಷೆ ನಡೆಸಲು ತಯಾರಿ ನಡೆದಿತ್ತು. ಅಂತಿಮ ವೇಳಾಪಟ್ಟಿಯನ್ನೂ ಪಿಯು ಬೋರ್ಡ್ ಬಿಡುಗಡೆ ಮಾಡಿತ್ತು. ಆದರೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ನಡೆಸುವ ಜೆ.ಇ.ಇ ಪರೀಕ್ಷೆಯ ಮೊದಲನೆಯ ಸೆಷನ್ ಅನ್ನು ಏಪ್ರಿಲ್ 16 ರಿಂದ 21 ರವರೆಗೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ವೇಳಾ‌ಪಟ್ಟಿ ಬದಲಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16‌ರಿಂದ ಮೇ 06 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಜೆ.ಇ.ಇ ಪರೀಕ್ಷೆಗಳು ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬಂದಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯ ಪರಿಷ್ಕರಿಸಿದ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ವಿದ್ಯಾರ್ಥಿಗಳು/ಪೋಷಕರುಗಳಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5:00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು jdexam.dpue@gmail.com ಇ-ಮೇಲ್ ವಿಳಾಸಕ್ಕೆ ಮಾತ್ರ ಕಳುಹಿಸಲು ತಿಳಿಸಿದೆ. ಅಂಚೆ ಮೂಲಕ ಹಾಗೂ ನಿಗದಿಪಡಿಸಿದ ದಿನಾಂಕದ ನಂತರ ಬರುವಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ‌.

  • ತಾತ್ಕಾಲಿಕ ದ್ವಿತೀಯ ಪಿಯುಸಿ ವೇಳಾಪಟ್ಟಿ
  • 22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
  • 23-4-2022- ಹಿಂದಿ
  • 25-4-2022- ಅರ್ಥಶಾಸ್ತ್ರ
  • 26-4-2022- ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
  • 27-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • 28-4-2022-ಅರೇಬಿಕ್, ಕನ್ನಡ
  • 30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
  • 4-5-2022- ಇಂಗ್ಲಿಷ್
  • 5-5-2022- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
  • 6-5-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
  • 7-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ,ಐಚ್ಛಿಕ ಕನ್ನಡ
  • 9-5-2022- ಇತಿಹಾಸ, ಭೌತಶಾಸ್ತ್ರ
  • 10-5-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top