ಬೆಂಗಳೂರು: 2022ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದ ನಂತರ ಮರು ಮೌಲ್ಯಮಾಪನ, ಮರು ಎಣಿಕೆಗೆ ಸಲ್ಲಿಸಿದ್ದ ವಿದ್ಯಾರ್ಥಿಗಳ ಫಲಿತಾಂಶ ಇಂದು(ಜು.31) ಪ್ರಕಟಗೊಂಡಿದೆ.
ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗಿದೆ. ಸದರಿ ಫಲಿತಾಂಶವನ್ನು ಇಲಾಖೆಯ ವೆಬ್ ಸೈಟ್ https://pue.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ. ಏಪ್ರಿಲ್, ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಜೂನ್ 18ರಂದು ಪ್ರಕಟಿಸಲಾಗಿತ್ತು.



