ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಫಲಿತಾಂಶ ಘೋಷಣೆ ಹಿನ್ನೆಲೆ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಬೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು. 2022–23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಮಂಡಳಿ ಮೌಲ್ಯಮಾಪನ ಪೂರ್ಣಗೊಳಿಸಿದೆ.



