ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆಯ (PUC result) ಫಲಿತಾಂಶ ನಾಳೆ (ಏ.8) ಪ್ರಕಟಿಸುವುದಾಗಿ ಘೋಷಣೆ ಮಾಡಿದೆ.ದ್ವಿತೀಯ ಪಿಯು ಪರೀಕ್ಷೆ-1ರ ಫಲಿತಾಂಶ ನಾಳೆ ಮಧ್ಯಾಹ್ನ 1.30ಕ್ಕೆ ಪ್ರಕಟಿಸುವುದಾಗಿ ಪಿಯು ಬೋರ್ಡ್ ಮಾಹಿತಿ ನೀಡಿದೆ.
ದಾವಣಗೆರೆ: ಅಡಿಕೆಗೆ ಮತ್ತೆ ಭರ್ಜರಿ ಬೆಲೆ; ಏ.7ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?
ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in ಅಧಿಕೃತ ಜಾಲತಾಣದಲ್ಲಿ ವೀಕ್ಷಿಸಬಹುದು. ನಾಳೆ ಮಧ್ಯಾಹ್ನ ಪಿಯು ಬೋರ್ಡ್ ಸುದ್ದಿಗೋಷ್ಠಿ ಬಳಿಕ, ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. ಕಳೆದ ಮಾ.1ರಿಂದ 20ರವರೆಗೆ ಪರೀಕ್ಷೆಗಳು ನಡೆದಿದ್ದವು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ಒದಗಿಸಲಿದೆ. ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಫಲಿತಾಂಶ ಚೆಕ್ ಮಾಡುವುದು ಹೇಗೆ..? ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://karresults.nic.inಅಥವಾ https://kseab.karnataka.gov.inಗೆ ಭೇಟಿ ನೀಡಬೇಕು. ಹೋಂ ಪೇಜ್ ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು. ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು. ಆ ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು. ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಗೂ ಅವಕಾಶ ಕಲ್ಪಿಸಲಾಗಿದೆ.



