Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!

ಬೆಂಗಳೂರು: ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಇಂದು (ಅ.11), ನಾಳೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಎರಡೂ ದಿನ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ.13 ರಿಂದ 15ರವರೆಗೆ ಭಾರೀ ಮಳೆ ಆಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top