ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಹಲವು ಕಡೆ ಉತ್ತಮವಾಗಿದ್ದು, ರೈತರು ಜಮೀನು ಮಾಗಿ ಮಾಡಿಕೊಳ್ಳಲು ಅನುಕೂಲವಾಗಿದೆ. ಈ ಮಳೆ ಮೇ. 3ರ ವರೆಗೂ ಮುಂದುವರೆಯಲಿದ್ದು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏ. 30ರಿಂದ ಮೇ 1ರ ವರೆಗೆ ಮಹಾರಾಷ್ಟ್ರ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.