ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಯಲ್ಲಿ ಇಂದಿನಿಂದ 24ರವರೆಗೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ನೈರುತ್ಯ ಮುಂಗಾರಿನ ಪ್ರಭಾವ ತಗ್ಗಿದ್ದು, ಅ.21ರಿಂದ ಹಿಂಗಾರು ಮಳೆ ಪ್ರವೇಶಿಸಲಿವೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದಲೇ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.22ರಿಂದ ಮಳೆ ಹೆಚ್ಚಾಗಲಿದೆ.