ಬೆಂಗಳೂರು: ಕರಾವಳಿ, ಮಲೆನಾಡು, ಒಳನಾಡಿನ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಐದು ದಿನ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದ 15 ದಿನದಿಂದ ನಿರಂತರ ಮಳೆ ಸುರಿಯುತ್ತಿದೆ. ಇದ ಜೊತೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು (ಜು.19) ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



