Connect with us

Dvgsuddi Kannada | online news portal | Kannada news online

ಈ 16 ಜಿಲ್ಲೆಯಲ್ಲಿ ಇಂದು, ನಾಳೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ

ಈ 16 ಜಿಲ್ಲೆಯಲ್ಲಿ ಇಂದು, ನಾಳೆ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳಲ್ಲಿ ಇಂದು(ಅ.22) ,ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಮನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಗರದಲ್ಲಿ ಯಲ್ಲೋ ಅಲರ್ಟ್‌ ಘೋಷಿಸಿದೆ. ಅ.23ರವರೆಗೆ ಹೆಚ್ಚು ಮಳೆ ಬೀಳುವ ಸಂಭವವಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top