ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು (ಸೆ.8) ಗುಡುಗು ಸಹಿತ ಮಳೆಯಾಗಲಿದ್ದು ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-45 ಕಿ.ಮೀ. ನಿಂದ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ,ಭಾನುವಾರ ಕೊಡಗು, ಚಿಕ್ಕಮಗಳೂರು ಸೇರಿ ರಾಜ್ಯದ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆಯಿದೆ.



