Connect with us

Dvgsuddi Kannada | online news portal | Kannada news online

ರಾಜ್ಯದ 7 ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ರಾಜ್ಯದ 7 ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ , ಬಾಗಲಕೋಟೆ , ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ , ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 45-55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ 32.7 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದ್ದರೆ, ಅತಿ ಕಡಿಮೆ 15.8 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top