Connect with us

Dvgsuddi Kannada | online news portal | Kannada news online

ವಾಯುಭಾರ ಕುಸಿತ: ಮುಂದಿನ ಒಂದು ವಾರ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆ ಮುನ್ನೆಚ್ಚರಿಕೆ ..!

ಪ್ರಮುಖ ಸುದ್ದಿ

ವಾಯುಭಾರ ಕುಸಿತ: ಮುಂದಿನ ಒಂದು ವಾರ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆ ಮುನ್ನೆಚ್ಚರಿಕೆ ..!

ಬೆಂಗಳೂರು: ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ಒಂದು ವಾರ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಒಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ. ಸಂಜೆ ಸಣ್ಣ ಮಳೆಯೊಂದಿಗೆ ಭಾರಿ ಮಳೆಯಾಗುವಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ನಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top