Connect with us

Dvgsuddi Kannada | online news portal | Kannada news online

ಡಿ.9 ರಿಂದ ರಾಜ್ಯದಲ್ಲಿ ನಾಲ್ಕು ದಿನ ಮತ್ತೆ ಮಳೆ ಮುನ್ಸೂಚನೆ…!

ಪ್ರಮುಖ ಸುದ್ದಿ

ಡಿ.9 ರಿಂದ ರಾಜ್ಯದಲ್ಲಿ ನಾಲ್ಕು ದಿನ ಮತ್ತೆ ಮಳೆ ಮುನ್ಸೂಚನೆ…!

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 9 ರಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ.

ಇಂದು (07) ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದ್ದು, ಮಧ್ಯಾಹ್ನದಷ್ಟೊತ್ತಿಗೆ ಬಿಸಿಲು ಬರಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರಲಿದೆ. ಮೈಚಾಂಗ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ 2-3 ದಿನ ಚಳಿ ವಾತಾವರಣದ ಜತೆ ಜಿಟಿಜಿಟಿ ಮಳೆಯಾಗಿತ್ತು. ಡಿ.8ರವರೆಗೆ ಇದೇ ರೀತಿ ವಾತಾವರಣ ಇರುತ್ತದೆ. ಡಿ.9ರಿಂದ ಡಿ.12ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.ಡಿ.13ರಿಂದ ಒಹಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top