ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜ ನಗರ, ತುಮಕೂರು, ಹಾಸನ, ಕೋಲಾರ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಕೊಪ್ಪಳ, ಗದಗ, ಬೆಳಗಾವಿ, ಹಾವೇರಿ, ಧಾರವಾಡದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಕಡೆ ಒಣ ಹಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



