Connect with us

Dvgsuddi Kannada | online news portal | Kannada news online

ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ‌; ರೈತರಿಗೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ‌; ರೈತರಿಗೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಆಗಲಿದೆ. ರೈತರು ಬೆಳೆಗಳು ಕಟಾವಿಗೆ ಬಂದಿದ್ದು, ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ನವೆಂಬರ್ 1 ವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ. ಇಂದಿನಿಂದ ನವೆಂಬರ್ 1ರವರೆಗೆ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ನವೆಂಬರ್ 1 ರವರೆಗೆ ಗುಡುಗು ಮತ್ತು ಮಿಂಚು ಸಂಭವಿಸಬಹುದು.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ 12 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಮಳೆಯಾಗುವ ಸೂಚನೆಯಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ಅ. 31ರಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top