Connect with us

Dvgsuddi Kannada | online news portal | Kannada news online

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಇಂದಿನಿಂದ ಆರು ದಿನ ಶೀತಗಾಳಿ, ಮೋಡಕವಿದ ವಾತಾವರಣ, ಮಳೆ ಮುನ್ಸೂಚನೆ

rain22

ಪ್ರಮುಖ ಸುದ್ದಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಇಂದಿನಿಂದ ಆರು ದಿನ ಶೀತಗಾಳಿ, ಮೋಡಕವಿದ ವಾತಾವರಣ, ಮಳೆ ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ಜನವರಿ 10ರವರೆಗೆ ರಾಜ್ಯದಲ್ಲಿ ಶೀತಗಾಳಿ, ಮೋಡ ಕವಿದ ವಾತಾವರಣ ಇರಲಿದೆ. ಹಾಗೆಯೇ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿ ಭಾಗದಲ್ಲಿ ಜನವರಿ 10ರವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜನವರಿ 8 ರಿಂದ ಮೋಡ ಕವಿದ ವಾತಾವರಣ, ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಜನವರಿ 7ರಿಂದ 9ರವರೆಗೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ವಿಜಯನಗರದಲ್ಲಿ ಜನವರಿ 6 ರಿಂದ 3 ದಿನಗಳ ಕಾಲ ಮಳೆಯಾಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top