ಬೆಂಗಳೂರು: ರಾಜ್ಯದ ಕೆಲ ಕಡೆ ಮೋಡಕವಿದ ವಾತಾವರಣವಿರಲಿದ್ದು, ಮುಂದಿನ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಸುಳ್ಯ ನಗರದಲ್ಲಿ ಸುಮಾರು 3 ಗಂಟೆಗೂ ಅಧಿಕ ಮಳೆಯಾಗಿದೆ. ಸುಳ್ಯ ನಗರದಲ್ಲಿ 112 ಮಿಲಿ ಮೀಟರ್ ಮಳೆ ಸುರಿದಿದೆ. ಚನ್ನರಾಯಪಟ್ಟಣ, ತಿಪಟೂರು, ಗೋಕಾಕ್, ಬೈಲಹೊಂಗಲ, ಮೂರ್ನಾಡು, ಭಾಗಮಂಡಲ, ಸಕಲೇಶಪುರ, ಹುಣಸೂರು, ಗೋಕರ್ಣ, ಅರಕಲಗೂಡು, ತರೀಕೆರೆ, ಅಜ್ಜಂಪುರ, ಯುಗಟಿ, ಬೇಲೂರು, ಹಿರಿಯೂರು, ಕೃಷ್ಣರಾಜಪೇಟೆ, ಕೃಷ್ಣರಾಜಸಾಗರ, ಸಾಗರದಲ್ಲಿ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



