ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಐದು ದಿನಗಳು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಧಾರಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು (20) ಗುಡುಗು ಸಹಿತ ಮಳೆ ಆಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ (39.5 ಡಿಗ್ರಿ ಸೆಲ್ಸಿಯಸ್) ಹಾಗೂ ಶಿವಮೊಗ್ಗದಲ್ಲಿ ಕನಿಷ್ಠ ಉಷ್ಣಾಂಶ (19 ಡಿಗ್ರಿ ಸೆಲ್ಸಿಯಸ್ ) ದಾಖಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇನ್ನು ಕೆಲವೆಡೆ ವರುಣ ತಂಪೆರೆಯಲಿದ್ದಾನೆ ಎಂದು ಸೂಚನೆ ಸಿಕ್ಕಿದೆ.ಇನ್ನು ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಳೆ ನಿರೀಕ್ಷೆ ಮಾಡಬಹುದು.



