Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ; ಈ 14 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಎರಡು ದಿನ ಭಾರೀ ಮಳೆ; ಈ 14 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗುತ್ತಿದ್ದು, ಸಾಮಾನ್ಯವಾಗಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಮಳೆ ಬರುವುದು ವಾಡಿಕೆ. ಹೀಗಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ‌ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಏಪ್ರಿಲ್​ 09ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಎರಡು ದಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಉಷ್ಣಾಂಶವೂ ಏರಿಳಿತವಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top