ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬದಲ್ಲಿ ರಾಜ್ಯದಾದ್ಯಂತ ಮೋಡ ಮುಸುಕಿದ ವಾತಾವರಣ ಇರಲಿದ್ದು, ನವೆಂಬರ್ 4ರಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು, ಮಲೆನಾಡು, ಒಳನಾಡುಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 2 ರಿಂದ 6ರ ತನಕ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನ.4ರಿಂದ ಗುಡುಗು, ಸಿಡಿಲು ಹೆಚ್ಚಾಗಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



