ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳು ಹಾಗು ಉತ್ತರ, ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಏ.23ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ( IMD) ಮುನ್ಸೂಚನೆ ನೀಡಿದೆ.
ಇಂದಿನಿಂದ (ಏ.20) ನಾಲ್ಕು ದಿನ ಕಾಲ ವಿವಿಧ ಜಿಲ್ಲೆಯಲ್ಲಿ ಮಳೆಯಾಗಲಿದೆ. ಶುಕ್ರವಾರವೂ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಭಾರಿ ಗಾಳಿ, ಗುಡುಗು, ಸಿಡಿಲಿನ ಸಹಿತ ಹಲವು ಜಿಲ್ಲೆ ಮಳೆ ಆಗಿದೆ.30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಏ.20ರ ಶನಿವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ. ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಒಣ ಹವೆ ಇರಲಿದೆ.
ಗರಿಷ್ಠ ಉಷ್ಣಾಂಶವು ಕಲಬುರಗಿ ಹಾಗೂ ರಾಯಚೂರಿನಲ್ಲಿ 41.4 ಡಿಗ್ರಿ ಸೆಲ್ಸಿಯಸ್‌ನಷ್ಟು ಅತ್ಯಧಿಕ ದಾಖಲಾಗಿದೆ. ವಿಜಯಪುರ ಹಾಗೂ ಕೊಪ್ಪಳದಲ್ಲೂ 40 ಡಿಗ್ರಿಯಷ್ಟಿದ್ದರೆ, ದಾವಣಗೆರೆ, ಗದಗ, ಬಾಗಲಕೋಟೆ ಹಾಗೂ ಮಂಡ್ಯದಲ್ಲಿ 39 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ.



