Connect with us

Dvgsuddi Kannada | online news portal | Kannada news online

ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಯಲ್ಲಿ ಭಾರಿ ಮಳೆ‌ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಯಲ್ಲಿ ಭಾರಿ ಮಳೆ‌ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. 29ರಿಂದ ಮೇ 3ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನಿಡಲಾಗಿದೆ. ಭಾರಿ ಮಳೆ ಹಿನ್ನೆಲೆ ಕೆಲ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

11ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ವಿಜಯಪುರ, ಹಾಸನ,ಚಿತ್ರದುರ್ಗ, ರಾಯಚೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬೀದರ್, ಕಲಬುರಗಿ ಮತ್ತು ಯಾದಗಿರಿ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಮಾಹಿತಿ ನೀಡಲಾಗಿದೆ.

ಮೇ 1 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮೇ 2 ರಂದು ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top