ಬೆಂಗಳೂರು: ರಣ ಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಬೆಂಗಳೂರು ಸುತ್ತಮುತ್ತ ಜೋರುವ ಮಳೆ ಸುರಿಯುತ್ತಿದೆ. ಈ ಮಳೆ ಮೇ 14ರವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 11ರಂದು ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಮೇ 12ರಂದು ಶಿವಮೊಗ್ಗ, ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಕೊಡಗು, ಮೇ 13 ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರದಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೋಡಿದೆ.



