ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ನವೆಂಬರ್ 16ರವರೆಗೆ ಭಾರೀ ಮಳೆ ಸುರಿಯಲಿದೆ. ಅದರಲ್ಲೂ ವಿಶೇಷವಾಗಿ ದಕ್ಷಿಣ ಕರ್ನಾಟಕದ ಪೂರ್ವ ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣ ಇರಲಿದೆ.
ನ. 16ರವರೆಗೂ ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಮತ್ತು ನ. 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಕೂಡ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಹೆಚ್ಚಾಗಲಿದೆ.



