ಬೆಂಗಳೂರು: ರಾಜ್ಯದಲ್ಲಿ ನ. 22ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿ, ಟ್ರಫ್ ಮತ್ತು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಒಳನಾಡಿನಲ್ಲಿ ಮಳೆ ಅಬ್ಬರಿಸಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ವಿಸ್ತರಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 20ರಂದು ಅಧಿಕ ಮಳೆ ಸುರಿಯಲಿದೆ.ಇನ್ನು ದಕ್ಷಿಣ ಒಳನಾಡಿನ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ.\
ಕರಾವಳಿಯಲ್ಲಿ ಗಂಟೆಗೆ 40 ರಿಂದ 60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ತಾಪಮಾನದಲ್ಲಿ ಇಳಿಕೆ ದಾಖಲಾಗಿದ್ದು ಚಳಿ ಜಾಸ್ತಿ ಆಗಿದೆ. 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಧಾರವಾಡದಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿ