Connect with us

Dvgsuddi Kannada | online news portal | Kannada news online

ಇನ್ನೂ ಮೂರು ದಿನ ಮಳೆ ಅಬ್ಬರ: ಬಿರುಗಾಳಿ ಸಹಿತ ವರುಣ ಆರ್ಭಟಕ್ಕೆ ಜನ ತತ್ತರ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ…!!!

ಪ್ರಮುಖ ಸುದ್ದಿ

ಇನ್ನೂ ಮೂರು ದಿನ ಮಳೆ ಅಬ್ಬರ: ಬಿರುಗಾಳಿ ಸಹಿತ ವರುಣ ಆರ್ಭಟಕ್ಕೆ ಜನ ತತ್ತರ; ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ…!!!

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ಒಳನಾಡಿನಲ್ಲಿ ಇನ್ನೂ ಮೂರು ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಬಿರುಗಾಳಿ, ಮಳೆಗೆ ವಾತಾವರಣದಲ್ಲಿ ಸಾಕಷ್ಟು ಬದಲಾವಣೆ ಆಗಿದ್ದು, ಶೀತ ಗಾಳಿ ಬೀಸುತ್ತಿದೆ. ಬಿರುಗಾಳಿ, ಮಳೆಗೆ ಜನ‌‌ ತತ್ತರಿಸಿ ಹೋಗಿದ್ದಾರೆ. ಎಲ್ಲಡೆ ನದಿ-ಹಳ್ಳ ಉಕ್ಕಿ ಹರಿಯುತ್ತಿವೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿಯ ಬೀಸುತ್ತಿದ್ದು, ಜು. 28ರವರೆಗೂ ಕರಾವಳಿ, ಮಲೆನಾಡು ದಕ್ಷಿಣ ಒಳನಾಡು ಭಾಗದಲ್ಲಿ ಮುಂಗಾರ ಮಳೆ ಅಬ್ಬರಿಸಲಿದೆ.

ರಾಜ್ಯದ ಕೆಲವೆಡೆ ಗುರುವಾರವೂ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕರಾವಳಿಯ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಜಿಲ್ಲೆಯ ಧಾರಾಕಾರ ಮಳೆಯಾಗುವ ಸಂಭವವಿದೆ.

ಕಲಬುರಗಿ, ವಿಜಯಪುರ, ಬೆಳಗಾವಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಭಾರೀ ಮಳೆಯೊಂದಿಗೆ ಗಾಳಿಯ ವೇಗವು 40ರಿಂದ 50 ಕಿ.ಮೀ. ತಲುಪುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.‌ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.

ಶಿವಮೊಗ್ಗ, ಕೊಡಗು & ಚಿಕ್ಕಮಗಳೂರು ಜಿಲ್ಲೆಗಳಿಗೆ ಕೂಡ ಜುಲೈ ಯೆಲ್ಲೋ ಅಲರ್ಟ್ ಇದೆ.ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ಎರಡು ವಾರದಿಂದ ಸುಳಿಗಾಳಿ (ಸ್ಟ್ರಫ್) ವಾತಾವರಣ ತೀವ್ರಗೊಂಡಿದೆ. ಇದು ವಾಯುಭಾರ ಕುಸಿತಕ್ಕೆ ಕಾರಣವಾಗಿದ್ದು, ಇದರಿಂದ ರಾಜ್ಯದ ಎಲ್ಲಡೆ ಭಾರೀ ಮಳೆಯಾಗುತ್ತಿದೆ.

ಉತ್ತರ ಒಳನಾಡಿನಲ್ಲಿ ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಳೆಯಾಗಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top