ಬೆಂಗಳೂರು: ಎರಡು ದಿನ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇಳಿಕೆಯಾಗಿದ್ದ ಮುಂಗಾರು ಮಳೆ, ಮತ್ತೆ ಅಬ್ಬರಿಸುವ ಮುನ್ಸೂಚನೆ ದೊರೆತಿದೆ. ಅರಬ್ಬಿ ಸಮುದ್ರ ಹವಾಮಾನ ವೈಪರಿತ್ಯ ಪರಿಣಾಮ ಮುಂದಿನ 5 ದಿನ ವಿವಿಧ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿ ಒತ್ತಡ ಇಳಿಕೆಯಾಟಗಿಲ್ಲ. ಹೀಗಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ( ಜು.29) ಮತ್ತೆ ಮಳೆಯಾಗಿದೆ. ಮುಙದಿನ ಐದು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಮಳೆಯಾಗಲಿದೆ.
ಒಂದು ತಿಂಗಳ ಮುಂಗಾರು ಮಳೆ ಅಬ್ಬರದಿಂದ ರಾಜ್ಯದ ಬಹುತೇಕ ಎಲ್ಲ ನದಿಗಳು ಉಕ್ಕಿ ಹರಿಯಲು, ಜಲಾಶಯಗಳು ಭರ್ತಿಯಾಗಿವೆ. ತಗ್ಗು ಪ್ರದೇಶಗಳಲ್ಲಿ ಅವಾಂತರ ಸೃಷ್ಟಿಯಾಗಿವೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಗೆ ಗುಡ್ಡ ಕುಸಿದರೆ, ಉತ್ತರ ಕರ್ನಾಟಕ ಭಾಗದಲ್ಲಿ ನದಿ ತೀರದ ಪ್ರದೇಶಗಳಲ್ಲಿ ಗ್ರಾಮಗಳು ಮುಳುಗಡೆ ಆಗಿವೆ. ಕೆಲವಡೆ ಜನಜಿವನ ಅಸ್ತವ್ಯಸ್ತವಾಗಿದೆ. ಆಗಸ್ಟ್ 4ರವರೆಗೆ ಸಾಧಾರಣದಿಂದ ಭಾರೀ ಮಳೆ ಬರಲಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆ ಮುಂದುವರಿದಿದೆ.



