ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಭಾರೀ ಮಳೆ ಸುರಿಯುತ್ತಿದೆ. ಈ ಮಳೆ ಮುಂದಿನ 2 ದಿನ ಮುಂದುವರಿಯಲಿದ್ದು, ನ.22ರಿಂದ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ನ.20ರಂದು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ನ. 20, 21 ರಂದು ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ ನ.22 ರಿಂದ ಮಳೆ ಕ್ಷೀಣಿಸುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.



