ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹೆಚ್ವಿನ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ , ಕೊಡಗು, ಚಿಕ್ಕಮಗಳೂರು, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು, ಒಳನಾಡಿನಲ್ಲಿ ಬಿರುಗಾಳಿ, ಮಳೆಗೆ ವಾತಾವರಣದಲ್ಲಿ ಮುಂಗಾರು ಮಳೆ ಸಾಕಷ್ಟು ಹಾನಿ ಮಾಡಿದೆ. ಸತತ ಬಿರುಗಾಳಿ, ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲಡೆ ನದಿ-ಹಳ್ಳ ಉಕ್ಕಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತದಿಂತ ಪ್ರಾಣ ಹಾನಿಯಾಗಿದೆ. ಕರಾವಳಿ, ಮಲೆನಾಡ ಸೌಂದರ್ಯ ಸವಿಯಲು ಪ್ರವಾಸ ಹೋಗುವ ಯೋಜನೆ ರೂಪಿಸಿಕೊಂಡಿದ್ದರೆ, ಸ್ವಲ್ಪ ದಿನ ಮುಂದೂಡಿ.
ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಮಧ್ಯಮ ಮಳೆಯಾಗಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ದಾವಣಗೆರೆಯಲ್ಲಿ ಸಾಧಾರಣ ಮಳೆಯಾದರೂ ತುಂಗಾ, ಭದ್ರಾ ಜಲಾಶಯ ಭರ್ತಿಯಿಂದ ಅಪಾರ ಪ್ರಮಾಣದ ನೀರು ತುಂಗಭದ್ರಾ ನದಿಗೆ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಯ ಹೊನ್ನಾಳಿ, ಹರಿಹರದ ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನಗ್ಗಿದೆ. ಜಿಲ್ಲೆಯ ರೈತರ ಜೀವನಾಡಿ ಭದ್ರೆ, ಕೇವಲ ಒಂದೇ ತಿಂಗಳಲ್ಲಿ ಭರ್ತಿಯಾಗಿದ್ದು, ರೈತರಲ್ಲಿ ಖುಷಿ ಮೂಡಿಸಿದೆ.