ಬೆಂಗಳೂರು: ರಾಜ್ಯದ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತೆ ಮಳೆ ಶುರುವಾಗಿದೆ. ಸೆಪ್ಟೆಂಬರ್ 2ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ.