ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಈ ಮಳೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ 2 ದಿನ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು,ಚಿಕ್ಕಮಗಳೂರು, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ,ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸೆ.1ರಿಂದ ಸೆ.2ರವರೆಗೆ ಭಾರೀ ಮಳೆಯಾಗುವ ಸಂಭವ ಇದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಆರೆಂಜ್ ಅರ್ಲಟ್ ನೀಡಿದೆ. ಗಂಟೆಗೆ 35-45 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಬಾಗಲಕೋಟೆ, ಗದಗ, ಚಿತ್ರದುರ್ಗ, ದಾವಣಗೆರೆ,ತುಮಕೂರಿನಲ್ಲಿ ಸೆ.1ರಂದು ಯೆಲ್ಲೋ ಅರ್ಲಟ್ ಇರಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ,ಹಾಸನ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರದಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಲಿದೆ.



