ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ತುಸು ಇಳಿಕೆಯಾಗಿದ್ದರೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮತ್ತೆ ಅಬ್ಬರಿಸಲಿದೆ. ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9 ಮತ್ತು 10ರಂದು ಹೆಚ್ಚಿನ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವ ಇದೆ.. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಸೆಪ್ಟೆಂಬರ್ 9, 10ರಂದು ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ಯಾದಗಿರಿ, ಬೀದರ್ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾನುವಾರ ಮಳೆಯಾಗಿದೆ.