ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆ, ಇನ್ನೂ ಎರಡ್ಮೂರು ದಿನ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಸೆ.11ರಿಂದ ಸೆ.12ರ ವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ನೀಡಿದೆ.
ಕರಾವಳಿಯಲ್ಲಿ ಪ್ರತಿ ಗಂಟೆಗೆ 30-40 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ. ಕೊಡಗಿನಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್ ಇರಲಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಬಹುತೇಕ ಭಾಗದ ಜಿಲ್ಲೆಗಳಲ್ಲಿ ಮಳೆ ಇಳಿಮುಖವಾಗಿದ್ದು, ಕೆಲ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ. ಬೆಂಗಳೂರು ಸೇರಿ ಕೆಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ.



