Connect with us

Dvg Suddi-Kannada News

ಜೂನ್ 12ರಿಂದ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಜೂನ್ 12ರಿಂದ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಜೂನ್ 12ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿ ಭಾಗದಲ್ಲಿ ಇಂದಿನಿಂದ ಜೂನ್ 14 ರವರೆಗೆ ಮಳೆ ಸಾಧ್ಯತೆ ಇದೆ ಹಾಗೂ ಜೂನ್ 12, 13ರಂದು ಉತ್ತರ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಕರಾವಳಿಯ ದಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂ.13ರಂದು ಆರೆಂಜ್​, 14ರಂದು ರೆಡ್​ ಅರ್ಲಟ್​ ಘೋಷಿಸಿದೆ. ಅಲ್ಲದೆ, ಮುಂದಿನ ಮೂರು ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ನೀಡಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.13ರಿಂದ ಮುಂದಿನ ಎರಡು ದಿನ ಆರೆಂಜ್​ ಅರ್ಲಟ್​ ಇದ್ದರೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top