ಬೆಂಗಳೂರು: ರಾಜ್ಯದ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ( ಸೆ.27) ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಎರಡ್ಮೂರು ದಿನ ಈ ಮಳೆ ಮುಂದುವರೆಯಲಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ
ಬಿರುಗಾಳಿ ಗಂಟೆಗೆ ಸುಮಾರು 55 ಕಿ.ಮೀ. ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಮುನ್ಸೂಚನೆ ಗಮನಿಸಿದರೆ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಪ್ರಕಾರ, ಸೆ. 27 ಮತ್ತು 28 ರಂದು ಉಪ ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಅಕ್ಟೋಬರ್ 2 ರಂದು ಸಹ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಇದು ಸಮುದ್ರ ಮಟ್ಟದಿಂದ 5.8 ಕಿ.ಮೀ. ವರೆಗಿನ ವ್ಯಾಪಿಸಿದೆ. ಪರಿಣಾಮ ಶುಕ್ರವಾರ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.



