Connect with us

Dvgsuddi Kannada | online news portal | Kannada news online

ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ಎರಡ್ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ; ಈ ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿ‌ ವಿವಿಧ‌ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳಕಾಲ ಮಳೆ‌ ಮುಂದುವರೆಯಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.‌ತುಮಕೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಅ. 18 ಮತ್ತು 19 ರಂದು ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top