ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕೆಲ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನ.15 ರಂದು ದಕ್ಷಿಣ ಒಳನಾಡಿನ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಭಾಗದಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಅಲ್ಪ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.
ಇದಲ್ಲದೆ ವಿಜಯನಗರ, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.



