Connect with us

Dvgsuddi Kannada | online news portal | Kannada news online

ಮಾರ್ಚ್ 21ರವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ

ಮಾರ್ಚ್ 21ರವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ‌ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮಳೆಯಾಗುವ ಸಾಧ್ಯತೆ ಇದೆ.ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಮಾರ್ಚ್ 20-21 ರ ನಡುವೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಕೊಡಗು, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂಊರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top