ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕೆಲವು ಭಾಗದಲ್ಲಿ ಮಾತ್ರ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅಕಾಲಿಕ ಮಳೆಯಿಂದ ಕೊಯ್ಲಿಗೆ ಬಂದಿರುವ ಭತ್ತ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.
ಇಂದು (ನ.16) ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಸಣ್ಣ ಪ್ರಮಾಣದ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದೆಡೆ ಒಣಹವೆ ಇರಲಿದೆ.
ಅಕಾಲಿಕ ಮಳೆ ಮಳೆಯಿಂದ ಭತ್ತ ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ.ಕಳೆದ ಕೆಲ ವಾರಗಳ ಹಿಂದೆ ಬಿಡುವು ಪಡೆದಿದ್ದ ಮಳೆ ಮತ್ತೆ ಬಿರುಗಾಳಿ,ಗುಡುಗು, ಸಿಡಿಲನೊಂದಿಗೆ ಅರ್ಭಟಿಸುತ್ತಿದೆ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.