ಬೆಂಗಳೂರು: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ನ.27 ರಿಂದ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ.26ರವರೆಗೆ ಯಾವುದೇ ಮಳೆ ಇರುವುದಿಲ್ಲ. ರಾಜ್ಯದಾದ್ಯಂತ ಒಣಹವೆ ಇರಲಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡ ಉಂಟಾಗಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರಿಂದ ನ.27 ರಿಂದ 3 ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮಂಡ್ಯ, ಮೈಸೂರು , ತುಮಕೂರು,ಚಾಮರಾಜನಗರ , ಚಿಕ್ಕಮಗಳೂರು ಮಳೆ ಮುನ್ಸೂಚನೆ ಇದೆ.
ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಹಾವೇರಿ, ಚಿತ್ರದುರ್ಗ, ವಿಜಯನಗರ, ಬೆಳಗಾವಿ, ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ನ. 27ರಿಂದ ರಾಜ್ಯದಲ್ಲಿ ರಾತ್ರಿ ವೇಳೆ ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.