ಬೆಂಗಳೂರು; ಫೆಂಗಲ್ ಚಂಡಮಾರುತ ಪ್ರಭಾವ ರಾಜ್ಯದಾದ್ಯಂತ ವ್ಯಾಪಿಸಿದ್ದು, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಜೊತೆ ಮಳೆಯೂ ಮುಂದುವರೆದಿದೆ. ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
- ರಾಜ್ಯದಾದ್ಯಂತ ವ್ಯಾಪಿಸಿದ ಫೆಂಗಲ್ ಚಂಡಮಾರುತ
- ಅಕಾಲಿಕ ಮಳೆಯಿಂದ ರೈತರು ತತ್ತರ
- ಭತ್ತ, ರಾಗಿ ಕೊಯ್ಲಿಗೆ ಮಳೆ ಅಡ್ಡಿ
- ರಾಜ್ಯದಲ್ಲಿ ಚಳಿ ಜೊತೆ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು ಹಾಗೂ ಹಾಸನ, ಮಂಡ್ಯ, ರಾಮನಗರದಂತಹ ಜಿಲ್ಲೆಗಳಲ್ಲಿ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಚಿಕ್ಕಮಗಳೂರು, ಚಿಕ್ಕಾಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಐಎಂಡಿ ಬೆಂಗಳೂರಿನ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂವಚನೆ ನೀಡಿದೆ.
ಉತ್ತರ ಒಳನಾಡಿದ ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆಗೆ ಹಲವು ಜಿಲ್ಲೆಗಳಲ್ಲಿ ಕ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುತು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ ಹಾಗೂ ಚಾಮರಾಜನಗರದ ಅಲ್ಲಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ತುಮಕೂರು , ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
ಅಕಾಲಿಕ ಮಳೆಗೆ ತತ್ತರ; ರಾಜ್ಯದ ರೈತರು ಅಕಾಲಿಕ ಮಳೆಗೆ ತತ್ತರಿಸಿ ಹೋಗಿದ್ದಾರೆ. ಮೆಕ್ಕೆಜೋಳ, ಭತ್ತ, ರಾಗಿ, ಕಬ್ಬು ಕಟಾವಿಗೆ ಬಂದಿದ್ದು, ಈ ಅಕಾಲಿಕ ಚಂಡಮಾರುತ ಪರಿಣಾಮ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು ಭತ್ತ, ರಾಗಿ ಕೊಯ್ಲಿಗೆ ಮಳೆ ಅಡ್ಡಿಯಾಗಿದೆ.