ಬೆಂಗಳೂರು: ಕಳೆದ ಮೂರ್ನಾಲ್ಕು ದಿನದಿಂದ ಜಿಟಿಜಿಟಿ ಮಳೆಯಿಂದ ಭತ್ತ, ರಾಗಿ ಕೊಯ್ಲಿಗೆ ಸಂಕಷ್ಟ ಎದುರಾಗಿದೆ. ಇಂದು(ಡಿ.7) ಸಹ ಮೋಡ ಕವಿದ ವಾತಾವರಣ ಇರಲಿದೆ. ದಾವಣಗೆರೆ ಸೇರಿ ವಿವಿಧ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಹಾಸನ, ದಾವಣಗೆರೆ, ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಜಿಟಿಜಿಟಿ ಮಳೆಯಾಗುವ ಸಂಭವ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಶನಿವಾರ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ತುಂತುರು ಮಳೆಯಾಗಲಿದೆ. ಮುಂದಿನ ಮೂರು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶನಿವಾರ ಬೆಳಿಗ್ಗೆ, ಸಂಜೆಯ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂಜಾನೆ ಅವಧಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಂಜು ಕಾಣಿಸಿಕೊಳ್ಳಲಿದೆ.